ಬಣಕಲ್ :ಚೀನಾದ ಹ್ಯಾಂಗ್ಝೌನಲ್ಲಿ ನಡೆಡಿರುವ ಪ್ಯಾರಾ ಏಷ್ಯನ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಕರ್ನಾಟಕದ ಮೂಡಿಗೆರೆಯ ಕ್ರೀಡಾಪಟು ರಕ್ಷಿತಾ ರಾಜು ಕೂಡ ಇದೀಗ ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶವೇ ಹೆಮ್ಮೆ ಪಡುವಂತಾ ಸಾಧನೆ ಮಾಡಿದ್ದರು.
ಇಂದು ಅವರ ಸ್ವಗ್ರಾಮಕ್ಕೆ ಆಗಮಿಸುವ ಸುದ್ದಿ ತಿಳಿದು ಬಣಕಲ್ ನಲ್ಲಿ ಸಾರ್ವಜನಿಕರು ಅದ್ದೂರಿಯಾಗಿ ಅವರನ್ನು ಬಣಕಲ್ ರಾಜಬೀದಿಯಲ್ಲಿ ಮೆರವಣಿಗೆ ಮೂಲಕ ಕರೆತಂದು ಸನ್ಮಾನಿಸಲಾಯಿತು.
ವಿವಿಧ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಮಕ್ಕಳು ಪಾಲ್ಗೊಂಡು ಅವರನ್ನು ಬರಮಾಡಿಕೊಂಡರು