ಕೊರೊನಾ ಹೆಚ್ಚಳ ಹಿನ್ನಲೆ : ಜಿಲ್ಲೆಯ ಸುಪ್ರಸಿದ್ದ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆ ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತದ ನಿರ್ದೇಶನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಅಧಿಕವಾಗಿ ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಸಿದ್ದ ತೀರ್ಥ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಗಸ್ಟ್ 4 ಬುಧವಾರದಿಂದ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಅವರು ಈ ಆದೇಶ ಹೊರಡಿಸಿದ್ದು, “ನೆರೆಯ ಕೇರಳ ರಾಜ್ಯದಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೋವಿಡ್‌ ಪ್ರಕರಣ ಹೆಚ್ಚಳ ಕಂಡುಬರುತ್ತಿದೆ. ಹೊರ ಜಿಲ್ಲೆ, ರಾಜ್ಯದವರು ಇಲ್ಲಿಗೆ ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳದಲ್ಲಿ ಸೇವೆಗಳನ್ನು ಸ್ಥಗಿತ ಮಾಡಲು ಸೂಚನೆ ನೀಡಲಾಗಿದೆ” ಎಂದು ಮಾದ್ಯಮಗಳಿಗೆ ತಿಳಿಸಿದ್ದಾರೆ .