ಬಣಕಲ್ : ಸಮೀಪದ ಮತ್ತಿಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಗುರುವಾರ ಶ್ರದ್ದಾ ಭಕ್ತಿಯಿಂದ ಶಾರದಾ ಪೂಜೆ ಸಮಾರಂಭವನ್ನು ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಿದರು.ಪುಟಾಣಿ ಮಕ್ಕಳು ಶ್ಲೋಕ ಗೀತಗಳ ಮೂಲಕವೇ ಶಾರದಾ ದೇವಿಗೆ ಪೂಜೆ ಸಲ್ಲಿಸಿದರು.
ಈ ಪೂಜೆಗೆ ಕೆಲವು ಪುಟಾಣಿ ಮಕ್ಕಳೇ ನೇತೃತ್ವ ವಹಿಸಿದ್ದರು. ಶಿಕ್ಷಕರು ನೀಡಿದ ಮಾರ್ಗದರ್ಶನದಂತೆ ತಾಯಿ ಶಾರದೆಯನ್ನು ಆರಾಧಿಸುವ ಮೂಲಕ ಗಮನ ಸೆಳೆದರು. ನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಮುಖ್ಯ ಶಿಕ್ಷಕಿ ಅಶ್ವಿನಿ ಹಾಗೂ ಶಿಕ್ಷಕರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ