ಬಣಕಲ್ : ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ಮೇಯುತ್ತಿದ್ದ ಕುರಿಗಳನ್ನು ಕಳ್ಳತನ ಮಾಡಿ ಅಪರಿಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಶಿವಮೊಗ್ಗ ಮೂಲದ ಭದ್ರಾವತಿಯ ಜಬೀವುಲ್ಲಾ ಮತ್ತು ಕುಟುಂಬದವರು ಕಾರಲ್ಲಿ ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ಸಮೀಪ ಮೇಯುತ್ತಿದ್ದ ಮೊಹಮ್ಮದ್ ಎಂಬುವವರ 5 ಕುರಿಗಳನ್ನು ಕಾರಿನಲ್ಲಿ ತುಂಬಿದಾಗ ಸ್ಥಳೀಯರೊಬ್ಬರು ಕುರಿ ಮಾಲೀಕರಿಗೆ ಮಾಹಿತಿ ನೀಡಿದ್ದು ವಿಷಯ ತಿಳಿದ ಸ್ಥಳೀಯರು ಜಮಾಯಿಸಿ ಆರೋಪಿ ಜಬೀವುಲ್ಲಾ ಗೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಸಬ್ ಇನ್ ಸ್ಪೆಕ್ಟರ್ ಕೌಶಿಕ್, ಪೊಲೀಸ್ ಸಿಬ್ಬಂದಿ ಜಗದೀಶ್ ಮತ್ತಿತರ ಸಿಬ್ಬಂದಿಗಳು ಭೇಟಿ ನೀಡಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ