ಅನರ್ಹ ಬಿಪಿಎಲ್ ಕಾರ್ಡ್ ರದ್ದು ಪಡಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು: ಸಿದ್ದರಾಮಯ್ಯ ಸೂಚನೆ

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.

ಬಿಪಿಎಲ್‌ ಕಾರ್ಡ್‌ ಗಳನ್ನು ಅನರ್ಹರು ಹೊಂದಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ಆದರೆ ನೆರೆ ರಾಜ್ಯ ತಮಿಳುನಾಡಿನಲ್ಲಿ ಶೇ.40 ದಷ್ಟು ಮಂದಿ ಬಿಪಿಎಲ್‌ ಕಾರ್ಡ್‌ ಹೊಂದಿದ್ದಾರೆ. ಆದರೆ, ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು.ಆದರೆ ರಾಜ್ಯದಲ್ಲಿ 1.27ಕೋಟಿ ಕುಟುಂಬಗಳಿಗೆ ಬಿ ಪಿ ಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಪಡಿಸಿ ಅರ್ಹರಿಗೆ ಬಿ ಪಿ ಎಲ್ ಕಾರ್ಡು ಒದಗಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.