ಬಿ ವಲಯ ಮಟ್ಟದ ಕ್ರೀಡಾಕೂಟ :ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾಗ್ಯ ಹಾಗೂ ನೌಷದ್

ಬಣಕಲ್ :ಬಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಣಕಲ್ ಪ್ರೌಢ ಶಾಲೆಯ9ನೇ ತರಗತಿಯ ವಿದ್ಯಾರ್ಥಿನಿ ಭಾಗ್ಯ ಹಾಗೂ 10ನೇ ತರಗತಿಯ ವಿದ್ಯಾರ್ಥಿ ನೌಷದ್ ಕ್ರೀಡಾಕೂಟದ ವೈಯಕ್ತಿಕ ಚಾಂಪಿಯನ್ ಶೀಪ್ ಪಡೆಯುವುದರ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಭಾಗ್ಯ ಹಾಗೂ ನೌಷದ್ 100ಮೀಟರ್ 400ಮೀಟರ್ 800ಮೀಟರ್ 4×100ಓಟ 4×400ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಮಕ್ಕಳ ಸಾಧನೆ ಬಗ್ಗೆ ಮಾತನಾಡಿದ ಮುಖ್ಯ ಶಿಕ್ಷಕರು ಮಕ್ಕಳು ಶಾಲೆಯ ಪಠ್ಯದ ಜೊತೆಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬೇಕು ಆಗ ಮಾತ್ರ ಮುಂದಿನ ದಿನಗಳಲ್ಲಿ ತಮ್ಮ ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಎಲ್ಲಾ ಶಿಕ್ಷಕರ ಜೊತೆಗೆ ದೈಹಿಕ ಶಿಕ್ಷಕರು ಹೆಚ್ಚಿನ ಶ್ರಮವಹಿಸಿದಾಗ ಎಲ್ಲ ವಿಭಾಗದಲ್ಲಿ ಸಾಧನೆ ಮಾಡಲು ಸಾಧ್ಯ ಎಂದರು.

ವರದಿ ✍️ಸೂರಿ ಬಣಕಲ್