ಬಣಕಲ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಾವಪೂರ್ಣ ಬಿಳ್ಕೊಡುಗೆ ಕಾರ್ಯಕ್ರಮ: ಮನಸಾರೆ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು

ಬಣಕಲ್: ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು. ಈ ಮಾತು ಬದುಕಿಗೂ ಅನ್ವಯಿಸುತ್ತದೆ. ಹೀಗಾಗಿ ಪ್ರತಿಯೊಬ್ಬರು ಶಿಕ್ಷಣ, ಉದ್ಯೋಗ ಹೀಗೆ ಎಲ್ಲಾ ಹಂತವನ್ನು ದಾಟಲೇಬೇಕು. ಹೀಗೆ ತಮ್ಮ ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಕಾಲೇಜು ಶಿಕ್ಷಣ ಪಡೆಯಲು ತೆರೆಳುವ ವಿದ್ಯಾರ್ಥಿಗಳಿಗೆ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಬಣಕಲ್ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿತ್ತು.

ವಿದ್ಯಾಸಂಸ್ಥೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿತ್ತು.

ಪಾಠ ಬೋಧಿಸುವವರು ಮಾತ್ರವಲ್ಲ. ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯವನ್ನು ಕಟ್ಟಿಕೊಡುವುದರ ಜೊತೆಗೆ ಸನ್ಮಾರ್ಗದಲ್ಲಿ ನಡೆಯುವಂತೆ ದಾರಿ ತೋರುವ ಮಾರ್ಗದರ್ಶಕರು ಇವರಾಗಿರುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಜೊತೆಗೆ ಆತ್ಮೀಯ ಬಾಂಧವ್ಯ ಬೆಸೆದುಕೊಂಡಿರುತ್ತಾರೆ. ಆದರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಕಲಿಕೆಯನ್ನು ಮುಂದುವರೆಸಿ ಒಳ್ಳೆಯ ಬದುಕನ್ನು ಕಟ್ಟಿಕೊಳ್ಳಬೇಕೆಂದರೆ ಶಾಲೆಗೆ ವಿದಾಯ ಹೇಳಿ ಕಾಲೇಜು ಮೆಟ್ಟಿಲು ಹತ್ತಲೇಬೇಕು. ಈ ಸಂದರ್ಭದಲ್ಲಿ ಹತ್ತನೇ ತರಗತಿ ಮಕ್ಕಳಿಗೆ ಬೀಳ್ಕೊಡುಗೆ ವಿದಾಯ ಹೇಳುವ ಕ್ಷಣದಲ್ಲಿ ವಿದ್ಯಾರ್ಥಿಗಳು ತಿದ್ದಿ ಬುದ್ಧಿ ಹೇಳಿ ಶಿಕ್ಷಣ ಹೇಳಿಕೊಟ್ಟ ಶಿಕ್ಷಕ ವೃಂದಕ್ಕೆ ಕೃತಜ್ಞತೆ ಸಲ್ಲಿಸಿದರು..