ಇಂದಿನಿಂದ ಎಸ್,ಎಸ್, ಎಲ್,ಸಿ ಪರೀಕ್ಷೆ:ಬಣಕಲ್ ಪ್ರೌಢ ಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು*

*ರಾಜ್ಯದಲ್ಲಿ ಇಂದಿನಿಂದ (ಮಾರ್ಚ್ 21) ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತಿವೆ. ಇಂದುಬಣಕಲ್ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಆಗಮಿಸಿ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದರು. ಸುತ್ತ ಮುತ್ತಲಿನ 10ಶಾಲೆಗಳ 284 ವಿದ್ಯಾರ್ಥಿಗಳು ಬಣಕಲ್ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ಬಣಕಲ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀನಿವಾಸ್ “ಕಳೆದೊಂದು ವರ್ಷದಿಂದ ಮಕ್ಕಳು ಪಟ್ಟ ಶ್ರಮ ಅಭ್ಯಾಸಿಸಿರುವುದನ್ನು ಆತ್ಮವಿಶ್ವಾಸದೊಂದಿಗೆ ಬರೆಯುವ ಮೂಲಕ ಮುಂದಿನ ಶೈಕ್ಷಣಿಕ ವರ್ಷದ ಕಡೆ ಕರೆದೊಯ್ಯುವ ಪರೀಕ್ಷೆಯ ಸಮಯ ಬಂದಿದೆ. ನಿರ್ಬೀತಿಯಿಂದ ಪರೀಕ್ಷೆ ಬರೆಯುವ ಮೂಲಕ ನಿಮ್ಮ ಗುರಿಯ ಕಡೆ ಹೆಜ್ಜೆ ಇರಿಸಿ, ಪರೀಕ್ಷೆ ಬರೆಯುತ್ತಿರುವ ಎಲ್ಲರಿಗೂ ಶುಭಾಶಯಗಳು” ಎಂದು ಹೇಳಿದರು.

ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಿದೆ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.