ಕಾಶ್ಮೀರದ ಪಹಲ್ ಗಾವ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ವಿ.ಎಚ್. ಪಿ ಹಾಗೂ ಭಜರಂಗದಳ ಕರೆ ನೀಡಿದ್ದ ಬಣಕಲ್ ಬಂದ್ ಗೆ ಬಹುತೇಕ ವರ್ತಕರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.
ಬೆಳಗ್ಗೆ 6ರಿಂದ ಮದ್ಯಾಹ್ನ 1ಗಂಟೆವರೆಗೆ ನಡೆದ ಬಂದ್ ಶಾಂತ ರೀತಿಯಲ್ಲಿ ನಡೆಯಿತು.
ಪಹಲ್ಗಾಮ್ನಲ್ಲಿ ಪೈಶಾಚಿಕ ಕೃತ್ಯ ನಡೆಸಿದ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು. ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವ ಮೂಲಕ ಸಾವನ್ನಪ್ಪಿದ ಪ್ರವಾಸಿಗರಿಗೆ ನ್ಯಾಯ ಕೊಡಿಸಬೇಕು ಎಂದು ವರ್ತಕರು ಆಗ್ರಹಿಸಿದರು.