ಬಣಕಲ್ ಝೆಡ್ ಟವರ್ ಮುಂಭಾಗದಲ್ಲಿ ಇಂದು ಬೆಳಗ್ಗೆ ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಘಟನೆ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ 2 ದ್ವಿಚಕ್ರ ವಾಹನ ಜಖಂಗೊಂಡಿದೆ.ವಿಜಯ್ ಎಂಬುವವರ ದ್ವಿಚಕ್ರ ವಾಹನ ಹಾಗೂ ಶೇಖರ್ ಎಂಬುವವರ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ.ಮೂಡಿಗೆರೆ ಕಡೆಯಿಂದ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಷಾತ್ ಅಪಾಯದಿಂದ ಪಾರಾಗಿದ್ದಾರೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ ✍️ಸೂರಿ ಬಣಕಲ್