2025 2026 ನೇ ಸಾಲಿನ ಬಿ ವಲಯ ಮಟ್ಟದ ಕ್ರೀಡಾಕೂಟವು ಕುಂದೂರ್ ಪ್ರೌಢಶಾಲೆ ಇವರ ಆಯೋಜಕತ್ವದಲ್ಲಿ ಬಣಕಲ್ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಣಕಲ್ ಪ್ರಾಡಶಾಲೆಯು 122 ಅಂಕದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡು ಶಾಲೆಗೆ ಕೀರ್ತಿ ತಂದಿರುತ್ತಾರೆ ಬಾಲಕರ ವಿಭಾಗದ ವೈಯಕ್ತಿಕ ಚಾಂಪಿಯನ್ ಆಗಿ ಬಣಕಲ್ ಪ್ರೌಢಶಾಲೆ ವಿದ್ಯಾರ್ಥಿ ನಿಶಾನ್ ನಾಯಕ್ ಹಾಗೂ ಬಾಲಕಿಯರ ವಿಭಾಗದ ವೈಯಕ್ತಿಕ ಚಾಂಪಿಯನ್ಆಗಿ ಬಣಕಲ್ ಪ್ರೌಢಶಾಲೆ ಯ ವಿದ್ಯಾರ್ಥಿನಿ ಭಾಗ್ಯ ಹೊರಹೋಮ್ಮಿದ್ದಾರೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು ಶಿಕ್ಷಕ ವೃಂದದವರಿಂದ ಅಭಿನಂದನೆ ಸಲ್ಲಿಸಿದ್ದಾರೆ
ಸಮಗ್ರ ಪ್ರಶಸ್ತಿಗೆ ಕಾರಣೀಭೂತರಾದ ಬಣಕಲ್ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಪ್ರವೀಣ್ ಹಾಗೂ ತಂಡದ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ ಶಿಕ್ಷಕರಾದ ಎ ಎನ್ ಪ್ರತೀಕ್ ಹಾಗೂ ಶಿಕ್ಷಕಿಯರಾದ ವಲ್ಸಮ್ಮ ದಿವ್ಯ ಜ್ಯೋತಿ ಹಾಗೂ ಈ ಕ್ರೀಡಾಕೂಟದಲ್ಲಿ ಸಹಕರಿಸಿದ ಎಲ್ಲಾ ಶಿಕ್ಷಕವೃಂದದವರಿಗೆ ಮೆಚ್ಚುಗೆ ವ್ಯಕ್ತವಾಗಿದೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ