ಪದವಿ ಪೂರ್ವ ಕಾಲೇಜು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕರಾಟೆ, ಹಾಗೂ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಮೂಡಿಗೆರೆಯ ಸೇಂಟ್ ಮಾರ್ಥಾಸ್ ಕಾಲೇಜಿನ ವಿದ್ಯಾರ್ಥಿ ಸೂಫಿಯನ್ ವಿಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾನೆ.ವಿದ್ಯಾರ್ಥಿಯ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಶಿಕ್ಷಕವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಸೂಫಿಯನ್ ಬಣಕಲ್ ಗ್ರಾಮ ಪಂಚಾಯಿತಿ ಸದಸ್ಯರಾದ ಇರ್ಫಾನ್ ರವರ ಪುತ್ರ ಮಗನ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಸೂಫಿಯನ್ ಪ್ರಾಥಮಿಕ ಶಿಕ್ಷಣವನ್ನು ಬಣಕಲ್ ರಿವರ್ ವ್ಯೂ ಶಾಲೆಯಲ್ಲಿ ಪೂರ್ಣ ಗೊಳಿಸಿ ಸೇಂಟ್ ಮಾರ್ಥಾಸ್ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ಓದುತ್ತಿದ್ದಾನೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ