ಗ್ರಾಮ ಪಂಚಾಯಿತಿ ಸದಾ ಜನರೊಂದಿಗೆ ಇರುವ ಇಲಾಖೆಯಾಗಿದೆ.ಅಧಿಕಾರ ವಿಕೇಂದ್ರೀಕರಣದ ಭಾಗವಾಗಿ ಗ್ರಾಮ ಪಂಚಾಯಿತಿಗಳು ಗ್ರಾಮ ಸರ್ಕಾರಗಳಾಗಿ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಸ್ಪಂದಿಸಿದಾಗ ಗ್ರಾಮ ಪಂಚಾಯಿತಿ ಆಶಯಗಳು ಈಡೇರುವ ಜೊತೆಗೆ ಜನರ ವಿಶ್ವಾಸಗಳಿಸಲು ಸಾಧ್ಯ ಎಂದುನಿರ್ಗಮನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ ಅಭಿಪ್ರಾಯ ಪಟ್ಟರು.
ಅವರು ಕಿರುಗುಂದ ಗ್ರಾಮ ಪಂಚಾಯಿತಿಗೆ ವರ್ಗಾವಣೆ ಗೊಂಡ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಸಿಬ್ಬಂದಿವರ್ಗ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಗ್ರಾಮದ ಅಭಿವೃದ್ಧಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳು ಪರಸ್ಪರ ಸಮನ್ವತೆಯಿಂದ ಕಾರ್ಯನಿರ್ವಹಿಸಿದಾಗ ಸರ್ಕಾರದ ಯೋಜನೆಗಳು ಸಾಕಾರಗೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಬಣಕಲ್ ಗ್ರಾಮ ಪಂಚಾಯಿತಿ ಸದಸ್ಯರು ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ನನ್ನ ಸೇವಾವಧಿಯಲ್ಲಿ ಅತ್ಯುತ್ತಮ ಸಹಕಾರ ನೀಡಿದ್ದಾರೆ ನೀವು ನೀಡಿದ ಸಹಕಾರಕ್ಕೆ ನಾನು ಸದಾ ಅಭಾರಿಯಾಗಿರುತ್ತೇನೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ:✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ