ಬಣಕಲ್: ಸರಿಯಾಗಿ ಬಸ್‌ಗಳು ಬಾರದ ಕಾರಣ ಹೆಗ್ಗುಡ್ಲು ಬಾಳೂರು ಮತ್ತಿಕಟ್ಟೆ ದಾಸರಹಳ್ಳಿ ಭಾಗದ ವಿದ್ಯಾರ್ಥಿಗಳು ಬಸ್ ಬರುವಿಕೆಗಾಗಿ ಕಾದು ಕಾದು ಖಾಸಗಿ ವಾಹನದಲ್ಲಿ ಬರುವಂತಾಗಿದೆ. ಪ್ರತಿನಿತ್ಯ ಬೆಳಗ್ಗೆ ತರಗತಿಗಳಿಗೆ ತಡವಾಗಿ ಹಾಜರಾಗುವಂತಾಗಿದೆ. ಇದರಿಂದಾಗಿ ಅನೇಕ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗುತ್ತಿಲ್ಲ. ವಾರದಲ್ಲಿ ಹಲವು ಬಾರಿ ಬಸ್ ವಿಳಂಬವಾಗುವುದರಿಂದ ಕಲಿಯುವ ಪ್ರಕ್ರಿಯೆಗೆll ಅಡ್ಡಿಯಾಗುತ್ತಿದೆ.
ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಯಾರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಪೋಷಕರ ಆತಂಕ: ಸರಿಯಾದ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಪೋಷಕರು ತಮ್ಮ ಮಕ್ಕಳ ಸುರಕ್ಷತೆ ಮತ್ತು ಶಿಕ್ಷಣದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿ, ಬಸ್ ವ್ಯವಸ್ಥೆಯನ್ನು ಸರಿಪಡಿಸಬೇಕೆಂದು ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ