ಬಣಕಲ್ : ಬಣಕಲ್ ಪ್ರೌಢಶಾಲೆಯಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
99ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಆ ಪೈಕಿ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 53ಪ್ರಥಮ, 20ದ್ವಿತೀಯ ಹಾಗೂ 11 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಸುಹೈಲಾ 549ಅಂಕ ಪಡೆದು ಶಾಲೆಗೆ ಪ್ರಥಮ, 533ಅಂಕ ಪಡೆದ ಸ್ನೇಹ ದ್ವೀತಿಯ ಸ್ಥಾನ ಪಡೆದಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ಸುಹೈಬ609 ಅಂಕ ಪಡೆದು ಶಾಲೆಗೆ ಪ್ರಥಮ ಸುದನ್ವಿ 605ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಮುಖ್ಯೋಪಾಧ್ಯಾಯರು ಶಿಕ್ಷಕರು, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಮಕ್ಕಳ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ