ಬಣಕಲ್ :ಕೊಟ್ಟಿಗೆಹಾರ ಸಮೀಪದ ದೇವನಗುಲ್ ಬಳಿ ಅರಣ್ಯಪ್ರದೇಶದಲ್ಲಿ ಸುಮಾರು 55 ರಿಂದ 60ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.ಮೃತನು ಕೋಲುಮುಖ, ತೆಳುವಾದ ಮೈಕಟ್ಟು, ಕಪ್ಪು-ಬಿಳಿ ಮಿಶ್ರಿತ ಕೂದಲು ಮತ್ತು ಗಡ್ಡ ಹೊಂದಿದ್ದಾರೆ.ಮೃತ ವ್ಯಕ್ತಿಯ ಗುರುತು ಪತ್ತೆಯಾಗದ ಕಾರಣ ಮೃತ ದೇಹವನ್ನು ಸಮಾಜ ಸೇವಕ ಆರೀಫ್ ಅವರು ಪೊಲೀಸರೊಂದಿಗೆ ಕೈ ಜೋಡಿಸಿ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ .
ಈ ಸಂಬಂಧ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಸಂಬಂಧ ಮಾತನಾಡಿದ ಪಿ ಎಸ್ ಐ ದಿಲೀಪ್ ಕುಮಾರ್ ಕಾಣೆಯಾದವರ ಬಗ್ಗೆ ಮಾಹಿತಿ ಪಡೆದು ತನಿಖೆ ಕೈಗೊಂಡಿದ್ದೇವೆ ಎಂದರು.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ