ಬೈಕ್ ಕಾರ್ ನಡುವೆ ಅಪಘಾತ:ಬೈಕ್ ಸವಾರನಿಗೆ ಗಂಭೀರ ಗಾಯ

ಬಣಕಲ್ :ಬೈಕ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಹೆಬ್ರಿಗೆ ಬಳಿ ನಡೆದಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ಕಿಗೆ ಡಿಕ್ಕಿ ಹೊಡೆದಿದೆ ಡಿಕ್ಕಿ ರಭಸಕ್ಕೆ ಬೈಕ್ ಚಾಲನೆ ಮಾಡುತ್ತಿದ್ದ ಸಲ್ಮಾನ್ ಹಾಗೂ ಹಿಂಬದಿ ಕುಳಿತ್ತಿದ್ದ ಅಯಾನ್ ಹಾಗೂ ಪಾದಚಾರಿ ಯೂಸುಫ್ ರವರು ಗಾಯಗೊಂಡಿದ್ದಾರೆ.ಗಾಯಗೊಂಡವರಲ್ಲಿ ಸಲ್ಮಾನ್ ರವರ ಕಾಲಿಗೆ ಗಂಭೀರ ಗಾಯವಾಗಿದೆ ಹೆಚ್ಚಿನ ಚಿಕಿತ್ಸೆಗಾಗಿ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ .
ಘಟನೆಗೆ ಸಂಭವಿಸಿದಂತೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ ✍️ಸೂರಿ ಬಣಕಲ್