ವಾಹನ ದಾಖಲಾತಿಗಳಿಲ್ಲದೆ ಸಂಚರಿಸುವವರಿಗೆ ದಂಡ ವಿಧಿಸಿ, ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಬಣಕಲ್ ಪಿಎಸ್‌ಐ (PSI) ದಿಲೀಪ್ ಕುಮಾರ್ ನೀಡಿದ್ದಾರೆ.
ದಾಖಲೆಗಳಿಲ್ಲದೆ ಸಿಕ್ಕಿಬಿದ್ದರೆ ದಂಡ ಪಾವತಿಸಬೇಕಾಗುತ್ತದೆ ಮತ್ತು ದಾಖಲೆಗಳನ್ನು ಸಲ್ಲಿಸದಿದ್ದರೆ ವಾಹನವನ್ನು ಜಪ್ತಿ ಮಾಡುವ ಅಥವಾ ಹೆಚ್ಚಿನ ದಂಡ ವಿಧಿಸಲಾಗುತ್ತದೆ.ಆದ್ದರಿಂದ, ಎಲ್ಲಾ ಮೂಲ ದಾಖಲೆಗಳನ್ನು ಯಾವಾಗಲೂ ನಿಮ್ಮೊಂದಿಗೆ ಇಟ್ಟುಕೊಳ್ಳುವುದು ಸೂಕ್ತ.ಎಂದರು.
ಅಪ್ರಾಪ್ತ ವಯಸ್ಕರಿಗೆ ವಾಹನ ಚಲಾಯಿಸಲು ನೀಡುವುದು ಕಾನೂನುಬಾಹಿರ ಮತ್ತು ಗಂಭೀರ ಅಪರಾಧವಾಗಿದೆ.
ದ್ವಿಚಕ್ರ ವಾಹನ ಸವಾರರು ಕೇವಲ ಕಾನೂನಿನ ಬಯಕ್ಕೆ ಹೆಲ್ಮೆಟ್ ಧರಿಸುವುದರ ಬದಲು ನಿಮ್ಮ ಮೇಲೆ ಅವಲಂಬಿತವಾಗಿರುವ ಕುಟುಂಬದವರ ಹಿತ ದೃಷ್ಟಿಯಿಂದ ಹೆಲ್ಮೆಟ್ ಧರಿಸಿರಿ ಎಂದು ಮನವಿ ಮಾಡಿದರು.
ಇದೆ ವೇಳೆ ಆಟೋ ಚಾಲಕರಿಗೂ ನಿಯಮಗಳನ್ನು ಪಾಲಿಸುವಂತೆ ತಿಳಿಸಲಾಗಿದೆ. ಆಟೋ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಮತ್ತು ಆಟೋಗಳ ದಾಖಲೆಗಳನ್ನುಸಮರ್ಪಕವಾಗಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.
ವರದಿ :✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ