ಬಣಕಲ್ :(PUC) ಕಾಲೇಜಿಗೆ ಸೇರುವ ಹೊಸ ವಿದ್ಯಾರ್ಥಿಗಳಿಗೆ ಕಾಲೇಜು ವಾತಾವರಣಕ್ಕೆ ಹೊಂದಿಕೊಳ್ಳಲು ಮತ್ತು ಅವರ ಶೈಕ್ಷಣಿಕ ಪ್ರಯಾಣಕ್ಕೆ ಸ್ಫೂರ್ತಿ ನೀಡಲು ‘ವೆಲ್ ಕಮ್ ಡೇ’ (Welcome Day/Freshers’ Day) ಬಣಕಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಕಾಲೇಜು ಪ್ರಾಚಾರ್ಯ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಸಕಾರಾತ್ಮಕವಾಗಿ ಯೋಚಿಸುವ ವ್ಯಕ್ತಿ ಮಾತ್ರ ಬದುಕಿನಲ್ಲಿ ನೆಮ್ಮದಿಯಿಂದ ಇರುತ್ತಾನೆ. ನಮ್ಮಲ್ಲಿರುವ ಜ್ಞಾನಬಲ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಯಶಸ್ಸಿಗೆ ಪ್ರಯತ್ನಿಸಬೇಕುʼ ಎಂದರು.

ʼಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪದವಿ ಪೂರ್ವ ಕಾಲೇಜಿನ ನಿರ್ದೇಶಕರಾದ
ಬಿ.ಎ. ಉಮ್ಮರ್ ಭಾರತೀಯ ಸಂಸ್ಕೃತಿಯಲ್ಲಿ ಅತಿಥಿಗಳಿಗೆ ಸ್ವಾಗತಿಸುವುದು ಹಾಗೂ ಬೀಳ್ಕೊಡುವ ಪದ್ಧತಿ ಇದೆ. ಅದರಂತೆ ಪ್ರಥಮ ವರ್ಷಕ್ಕೆ ಬಂದ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಆತ್ಮೀಯವಾಗಿ ಸ್ವಾಗತಿಸುವ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳು ಸತತ ಅಧ್ಯಯನದಲ್ಲಿ ತೊಡಗಿಸಿಕೊಂಡು ಸಾರ್ಥಕ ಬದುಕು ರೂಪಿಸಿಕೊಳ್ಳಿʼ ಎಂದು ಸಲಹೆ ನೀಡಿದರು.

ʼಇಂದಿನ ಯುವಜನತೆ ಪುಸ್ತಕಕ್ಕೆ ಸೀಮಿತವಾಗದೆ, ಸಮಾಜದಲ್ಲಿನ ಓರೆಕೋರೆಗಳನ್ನು ಅರಿತುಕೊಳ್ಳಲು ಪ್ರಯತ್ನಿಸಬೇಕು. ಸಮಾಜದಲ್ಲಿ ಬರುವ ನಕರಾತ್ಮಕ ಯೋಚನೆಗಳಿಗೆ ಆದ್ಯತೆ ನೀಡದೆ ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕುʼ ಎಂದರು.
ಕಾರ್ಯಕ್ರಮದಲ್ಲಿ.ಬಿ.ಡಿ. ವಿಜೇಂದ್ರಗೌಡರು ಬಿ ಶಿವರಾಂ ಶೆಟ್ರು ಕಾಲೇಜಿನ ಪ್ರಧ್ಯಾಪಕರುಹಾಗೂಕಾಲೇಜು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ