ಬಣಕಲ್ :ದಾಸರಹಳ್ಳಿ ಗ್ರಾಮದಲ್ಲಿ ವರ್ಷಗಳಿಂದ ಕಲುಷಿತ ನೀರು ಪೂರೈಕೆ ಆಗುತ್ತಿತ್ತು ಈ ಬಗ್ಗೆ ಬಣಕಲ್ ನ್ಯೂಸ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವರದಿ ಪ್ರಸಾರವಾಗಿತ್ತು.
ಕಲುಷಿತ ನೀರು ಪೂರೈಕೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ,
ಬಣಕಲ್ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳು ಹಾಗೂ ನೀರಿನ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ. ಕಲುಷಿತ ನೀರು ಪೂರೈಕೆ ಎನ್ನುವ ಶೀರ್ಷಿಕೆಯಡಿ ಬಣಕಲ್ ನ್ಯೂಸ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ಈ ವರದಿಗೆ ಸ್ಪಂದಿಸಿದ ಅಧಿಕಾರಿಗಳು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಗ್ರಾಮಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ