ಬಣಕಲ್ :ತಾಲೂಕಿನ ಕುಂದೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮಸಭೆಯನ್ನು ಬಹಿಷ್ಕರಿಸಿದ ಘಟನೆ ನಡೆಯಿತು.
ಸಭೆಗೆ ಬಂದು ಗ್ರಾಮದ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕಾದ ಪೂರ್ಣ ಪ್ರಮಾಣದ ಅಧಿಕಾರಿಗಳು ಬಾರದೇ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿತ್ತು. ಹಿಂದಿನಿಂದಲೂ ಅಧಿಕಾರಿಗಳು ಗ್ರಾಮಸಭೆಗೆ ಗೈರಾಗುವುದು ಪರಿಪಾಠವಾಗಿ ಪರಿಣಮಿಸಿತ್ತು. ಗ್ರಾಮಸಭೆಗಳನ್ನು ಕೇವಲ ಕಾಟಾಚಾರಕ್ಕೆ ಹಮ್ಮಿಕೊಳ್ಳಲಾಗುತ್ತಿದೆ
ಗ್ರಾಮಸಭೆಗೆ ಯಾವ ಯಾವ ಇಲಾಖೆಯ ಅಧಿಕಾರಿಗಳು ಬಂದಿದ್ದಾರೆ ಎಂಬುದನ್ನು ಖಾತರಿಪಡಿಸಿಕೊಂಡು ಸಭೆ ನಡೆಸಬೇಕು ಎಂದು ಒತ್ತಾಯಿಸಿದರು. ಇದರಿಂದ ಆಕ್ರೋಶಿತರಾದ ಗ್ರಾಮಸ್ಥರು ಪ್ರತಿಬಾರಿಯೂ ಕೇವಲ ಕಾಟಾಚಾರದ ಗ್ರಾಮಸಭೆಯನ್ನಾಗಿಸಿ ಸಭೆ ಮುಗಿಸಲಾಗುತ್ತದೆ. ಸಭೆಯಲ್ಲಿ ಮುಖ್ಯವಾಗಿ ಗ್ರಾಮಸ್ಥರು ಸಮಸ್ಯೆಗಳ ಅಹವಾಲನ್ನು ಸ್ವೀಕರಿಸಿ ಪರಿಹರಿಸಬೇಕಾದ ಅಧಿಕಾರಿಗಳು ಹಾಜರಿರುವುದಿಲ್ಲ. ಇದರಿಂದಾಗಿ ಕಳೆದ ಐದು ವರ್ಷದಿಂದ ಯಾವುದೇ ಅಭಿವೃದ್ಧಿ ಆಗದೆ ಕುಂಠಿತಗೊಂಡಿದೆ ಗ್ರಾಮದಲ್ಲಿನ ಅದೆಷ್ಟೋ ಸಮಸ್ಯೆಗಳು ಪರಿಹಾರ ಕಾಣುತ್ತಿಲ್ಲ. ಆದ್ದರಿಂದ ಹಾಜರಿರಬೇಕಾದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುವವರೆಗೂ ಗ್ರಾಮಸಭೆ ನಡೆಸಲಾರದೆ ಆಕ್ರೋಶ ವ್ಯಕ್ತಪಡಿಸಿ ಸಭೆಯನ್ನೇ ಧಿಕ್ಕರಿಸಿ ಹೊರಬಂದರು. ಗ್ರಾಪಂ ಸಭಾಭವನದಿಂದ ಹೊರ ಬಂದ ಗ್ರಾಮಸ್ಥರು ಸಭೆಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದಾಗಿ ಪೂರ್ಣ ಪ್ರಮಾಣದ ಇಲಾಖೆಯ ಅಧಿಕಾರಿಗಳು ಹಾಜರಿರುವವರೆಗೂ ಸಭೆ ನಡೆಸಲು ಅವಕಾಶ ಮಾಡಿಕೊಡುವುದಿಲ್ಲ. ಮುಂದಿನ ಗ್ರಾಮಸಭೆಯಲ್ಲಿ ಅಧಿಕಾರಿ ವರ್ಗದವರು ಹಾಜರಿಲ್ಲದಿದ್ದರೆ ಪುನಃ ಸಭೆ ಬಹಿಷ್ಕರಿಸುವ ಬಗ್ಗೆ ಹುಲ್ಲೆಮನೆ ಕುಂದೂರು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ