ಕೊಳೆತ ಸ್ಥಿತಿಯಲ್ಲಿ ಮೃತದೇಹ :6ದಿನಗಳ ನಂತರ ಪ್ರಕರಣ ಬೆಳಕಿಗೆ


ಬಣಕಲ್ :ಕೆ ತಲಗೂರು ಗ್ರಾಮದ ಮನೆಯೊಂದರಲ್ಲಿ ವ್ಯಕ್ತಿಯ ಶವವೊಂದು ತೀವ್ರವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತಲಗೂರು ಗ್ರಾಮದ ಕೃಷ್ಣೆಗೌಡ (60) ಎಂಬುವರ ಮೃತದೇಹ ಎಂದು ತಿಳಿದು ಬಂದಿದೆ. ಕಳೆದ ನಾಲ್ಕು ಐದು ದಿನಗಳ ಹಿಂದೆ ಈ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದ್ದು, ಶವದಿಂದ ತೀವ್ರ ದುರ್ನಾಥ ಬರುತ್ತಿತ್ತು.

ಮೃತ ವ್ಯಕ್ತಿ ಒಬ್ಬರೇ ಮನೆಯಲ್ಲಿ ವಾಸವಾಗಿದ್ದರು ಮಕ್ಕಳು ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಕಾರಣ ಪತ್ನಿ ಮಕ್ಕಳೊಂದಿಗೆ ಅಲ್ಲೇ ನೆಲಸಿದ್ದರು. ಪ್ರತಿದಿನ ಮಕ್ಕಳು ಕರೆ ಮಾಡಿ ಅರೋಗ್ಯ ವಿಚಾರಿಸಿಕೊಳ್ಳುತ್ತಿದ್ದರು. ಸೋಮವಾರದ ನಂತರ ಯಾರ ಕಣ್ಣಿಗೂ ಕಾಣಿಸಿರಲಿಲ್ಲ ಎಂದು ಅಕ್ಕ ಪಕ್ಕದ ನಿವಾಸಿಗಳು ತಿಳಿಸಿದ್ದಾರೆ.ಮನೆಯವರುಎಷ್ಟೇ ಕರೆ ಮಾಡಿದರೂ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನ ಬಂದು ಸಂಬಂಧಿಕರು ಮನೆಗೆ ಬಂದು ನೋಡಿದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇರುವುದು ಪತ್ತೆಯಾಗಿದೆ.ನಂತರ ಬಾಳೂರು ಠಾಣೆಗೆ ಮಾಹಿತಿ ನೀಡಿದ್ದಾರೆ. ಕೊಳೆತ ಸ್ಥಿತಿಯಲ್ಲಿ ಇದ್ದ ಮೃತ ದೇಹವನ್ನು ಸಮಾಜ ಸೇವಕ ಆರೀಫ್ ಹಾಗೂ ಹರೀಶ್ ರವರು ಮನೆಯಿಂದ ಹೊರಗೆ ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ ✍️ಸೂರಿ ಬಣಕಲ್