ತಂಬಾಕು ಉತ್ಪನ್ನ ನಿಯಂತ್ರಣ ಕಾಯ್ದೆ ಉಲ್ಲಂಘನೆ:ದಂಡ ವಸೂಲಿ

ಬಣಕಲ್ :ಬೀಡಿ, ಸಿಗರೇಟು, ಗುಟ್ಕಾ ಮತ್ತಿತರೆ ತಂಬಾಕು ವಸ್ತುಗಳನ್ನು ನಿಯಮ ಮೀರಿ ಮಾರಾಟ ಮಾಡುತ್ತಿದ್ದ ಅಂಗಡಿ ಗಳ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸ್‌ಮತ್ತಿತರೆ ಇಲಾಖೆ ಅಧಿಕಾರಿಗಳು 11 ಪ್ರಕರಣಗಳಲ್ಲಿ 1150 ರೂ .ದಂಡ ವಿಧಿಸಿ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.


ಮೂಡಿಗೆರೆ ತಾಲ್ಲೂಕಿನ ಬಣಕಲ್ ನಲ್ಲಿ ದಿನಾಂಕ/27/08/2026 ರಂದು ಕೊಟ್ಪಾ ಕಾರ್ಯಾಚರಣೆ ನಡೆಸಲಾಯಿತು. ಅಂಗಡಿ ಹೋಟೆಲ್ ಇನ್ನಿತರೆ ವಾಣಿಜ್ಯ ಕ್ಷೇತ್ರಗಳಲ್ಲಿ ಕಾರ್ಯಾಚರಣೆ ಮಾಡಿ, ನಿಯಮದ ಬಗ್ಗೆ ಅರಿವು ಮೂಡಿಸಲಾಯಿತು.


ಕಾಯಿದೆಯ ನಿಯಮದಂತೆ
ತಂಬಾಕು ಉತ್ಪನ್ನಗಳನ್ನು 21 ವರ್ಷದೊಳಗಿನ ಮಕ್ಕಳಿಗೆ ಮಾರಾಟ ನಿಷೇಧ,
ತಂಬಾಕು ಉತ್ಪನ್ನಗಳನ್ನು ಬಿಡಿಬಿಡಿಯಾಗಿ ಮಾರಾಟ ನಿಷೇಧ. ತಂಬಾಕು ಉತ್ಪನ್ನಗಳ ಪ್ರದರ್ಶನ ನಿಷೇಧ.
ಸಾರ್ವಜನಿಕ ಪ್ರದೇಶದಲ್ಲಿ ತಂಬಾಕು ಸೇವನೆ ನಿಷೇಧ.
ಸಾರ್ವಜನಿಕ ಪ್ರದೇಶದಲ್ಲಿ ತಂಬಾಕು ನಿಷೇಧಿತ ಪ್ರದೇಶ
ಎಂಬ ಫಲಕ ಕಡ್ಡಾಯ. ಇನ್ನಿತರೆ ನಿಯಮಗಳನ್ನು ಮನವರಿಕೆ ಮಾಡಿಕೊಡಲಾಯಿತು. ಹಾಗೂ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.

ಒಟ್ಟು 8 ಪ್ರಕರಣ ದಾಖಲಿಸಿ 1200 ದಂಡ ವಿಧಿಸಲಾಯಿತು.
ಕಾರ್ಯಾಚರಣೆಯಲ್ಲಿ ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳು ಭಾಗವಹಿಸಿದ್ದರು.