ಮೂಡಿಗೆರೆ ಹೊಯ್ಸಳ ಕ್ರೀಡಾಂಗಣದಲ್ಲಿ ಅಗತ್ಯ ಮೂಲ ಸೌಕರ್ಯ ಕೊರತೆ:ಸಮಸ್ಯೆ ಪರಿಹಾರಕ್ಕೆ ಸಾಮಾಜಿಕ ಕಾರ್ಯಕರ್ತ ಸಾಜೀದ್ ಅಗ್ರಹ

ಬಣಕಲ್ :ಕ್ರೀಡಾ ಇಲಾಖೆ ಯು ಕ್ರೀಡೆಗೆ ಪ್ರೋತ್ಸಾಹ ನೀಡುತ್ತೇವೆ ಎಂದು ಹೇಳುತ್ತಾರೆ ಆದರೆ ಕ್ರೀಡಾಳುಗಳಿಗೆ ಅವಶ್ಯವಿರುವ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸುವಲ್ಲಿ ನಿರ್ಲಕ್ಷ ತೋರಿಸುತ್ತಿದ್ದಾರೆ.
ಮೂಡಿಗೆರೆ. ಹೊಯ್ಸಳ ಕ್ರೀಡಾಂಗಣದಲ್ಲಿಸರಿಯಾದ ರೀತಿಯಲ್ಲಿ ಅಗತ್ಯ ಮೂಲ ಸೌಕರ್ಯಗಳು ಇಲ್ಲದೆ ಪರದಾಡುವಂತೆ ಆಗಿದೆ. ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು , ಕರ್ತವ್ಯ ನಿರ್ವಹಿಸುವ ಶಿಕ್ಷಕರು, ಹಾಗೂ ಕಾರ್ಯಕ್ರಮ ವೀಕ್ಷಿಸಲು ಆಗಮಿಸುವ ಸಾರ್ವಜನಿಕರು ಹಲವಾರು ಸಮಸ್ಯೆಗಳನ್ನು ಎದುರಿಸುತಿದ್ದಾರೆ.
ರಾಜಕೀಯ ನಾಯಕರ ಬೃಹತ್ ಸಮಾವೇಶಗಳು ಸ್ವಾತಂತ್ರ ದಿನಾಚರಣೆ ಗಣರಾಜ್ಯೋತ್ಸವ ಬಂದಾಗ ಕ್ರೀಡಾಂಗಣದಲ್ಲಿ ತಾತ್ಕಾಲಿಕ ದುರಸ್ತಿ ಮಾಡುತ್ತಾರೆ. ರಾಷ್ಟ್ರೀಯ ಹಬ್ಬ ಕ್ರೀಡಾಂಗಣದಲ್ಲಿ ಆಚರಿಸುವ ಕಾರಣ ಮಣ್ಣು ಸುರಿದು ಸರಿ ಮಾಡುತ್ತಾರೆ ಆಚರಣೆಯ ನಂತರ ಯಥಾ ಸ್ಥಿತಿ ಮುಂದುವರೆಯುತ್ತದೆ. ಕ್ರೀಡಾಭ್ಯಾಸ ಮಾಡಲು ಬಂದಾಗ ಸಮಸ್ಯೆಗಳನ್ನು ಎದುರಿಸುತ್ತಾರೆ ಜಿಲ್ಲೆಯಲ್ಲಿ ಹಲವು ಪ್ರತಿಭಾವಂತ ಆಟಗಾರರನ್ನು ಮೂಡಿಗೆರೆ ತಾಲೂಕಿನಲ್ಲಿದ್ದಾರೆ ಎಂಬ ಕೀರ್ತಿ ಇದ್ದರು ಇಲ್ಲವಂತಾಗಿದೆ.
ಕುಡಿಯುವ ನೀರು , ಶೌಚಾಲಯ ವಿಶ್ರಾಂತಿ ಸ್ಥಳ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳ ಕೊರತೆಯಿಂದ ಎಲ್ಲರಿಗೂ ತೊಂದರೆ ಉಂಟಾಗುತ್ತಿದೆ. ಕ್ರೀಡಾಪಟುಗಳ ಆರೋಗ್ಯ , ಸುರಕ್ಷತೆ ಹಾಗೂ ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಈ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹಾರಿಸುವುದು ಅತ್ಯಗತ್ಯವಾಗಿದೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿ , ಮೂಡಿಗೆರೆ ಹೊಯ್ಸಳ ಕ್ರೀಡಾಂಗಣದಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ಮುಲಕ ಕ್ರೀಡಾಪಟುಗಳು , ಶಿಕ್ಷಕರು ಹಾಗೂ ವೀಕ್ಷಕರಿಗೆ ಅನುಕೂಲಕರ ವಾತಾವರಣವನ್ನು ಕಲ್ಪಿಸಬೇಕಾಗಿ ತಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಸಾಮಾಜಿಕ ಕಾರ್ಯಕರ್ತ ಸಾಜೀದ್.ಬಣಕಲ್