ಬಣಕಲ್: ಬಾಳೆಹೊನ್ನೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಸ್ಪರ್ಧೆಯಲ್ಲಿ ಬಣಕಲ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಿಂಧೂಶ್ರೀ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾಳೆ.
ವಿದ್ಯಾರ್ಥಿನಿಯ ಈ ಸಾಧನೆಯು ಶಾಲೆಗೆ ಹಾಗೂ ಊರಿಗೆ ಹೆಮ್ಮೆಯ ಕ್ಷಣವಾಗಿದೆ. ಸಿಂಧೂಶ್ರೀ ಅವರ ಕ್ರೀಡಾ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದು, ರಾಜ್ಯ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ