ಬಣಕಲ್ ಶ್ರಮಜೀವಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಬಣಕಲ್: ಬಣಕಲ್ ಶ್ರಮಜೀವಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.


ಇಂದು ಶನಿವಾರ ಬಣಕಲ್ ಆಟೋ ನಿಲ್ದಾಣದಲ್ಲಿ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಒಟ್ಟಾಗಿ ಸೇರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ಮೂಲಕ ಕನ್ನಡಾಭಿಮಾನ ಮೆರೆದರು. ಈ ಸಂದರ್ಭದಲ್ಲಿ ಕನ್ನಡ ಧ್ವಜಕ್ಕೆ ಗೌರವ ಸಲ್ಲಿಸಿ, ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಆಟೋ ಚಾಲಕರು ಹಾಗೂ ಮಾಲೀಕರು ಉಪಸ್ಥಿತರಿದ್ದರು.


ವರದಿ ✍️ಸೂರಿ ಬಣಕಲ್