ಬಣಕಲ್: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಎಲ್ಲೆಡೆ ಮನೆಮಾಡಿದ್ದು, ಬಣಕಲ್ನಲ್ಲಿ ಪಟಾಕಿ ಅಂಗಡಿಗಳಲ್ಲಿ ವ್ಯಾಪಾರ ಭರದಿಂದ ಸಾಗುತ್ತಿದೆ.
ಬಣಕಲ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಸಾಲು ಸಾಲಾಗಿ ತೆರೆದಿರುವ ಪಟಾಕಿ ಅಂಗಡಿಗಳಲ್ಲಿ ವ್ಯಾಪಾರಸ್ಥರು ತಮ್ಮ ತಮ್ಮ ಅಂಗಡಿಗಳಲ್ಲಿ ನಿಂತು ಗ್ರಾಹಕರನ್ನು ಆಕರ್ಷಿಸುತ್ತಿರುವ ದೃಶ್ಯ ಕಂಡುಬಂತು. ಹಬ್ಬದ ಸಂಭ್ರಮಕ್ಕೆ ಮೆರುಗು ನೀಡಲು ಮಕ್ಕಳು ಸೇರಿದಂತೆ ಕುಟುಂಬ ಸಮೇತ ಜನರು ವಿವಿಧ ಅಂಗಡಿಗಳಿಗೆ ಭೇಟಿ ನೀಡಿ ತಮಗೆ ಇಷ್ಟವಾದ ಪಟಾಕಿಗಳನ್ನು ಖರೀದಿಸುವಲ್ಲಿ ನಿರತರಾಗಿದ್ದಾರೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬಣಕಲ್ನಲ್ಲಿ ಪಟಾಕಿ ವ್ಯಾಪಾರ ಚುರುಕುಗೊಂಡಿದ್ದು, ಮಾರುಕಟ್ಟೆಯಲ್ಲಿ ಹಬ್ಬದ ಕಳೆ ಹೆಚ್ಚಾಗಿದೆ
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ