ಬಣಕಲ್ :ಬಣಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಭಾಷ್ ನಗರ, ಕುವೆಂಪುನಗರ, ಇಂದಿರಾನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ.
ಗ್ರಾಮದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಹಲವು ಸಮಸ್ಯೆಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಮುಖವಾಗಿ,
ಕುಡಿಯುವ ನೀರಿನ ಸಮಸ್ಯೆ.
ವಿದ್ಯುತ್ ಸಮಸ್ಯೆ.
ಗಣಪತಿ ಪೆಂಡಾಲ್‌ನಿಂದ ರಸ್ತೆ ದುರಸ್ತಿ ಮಾಡಬೇಕಿರುವುದು.
ಗೋಪಾಲ್ ಆಚಾರ್ಯ ಅವರ ಮನೆ ಹತ್ತಿರ ಬಾಕ್ಸ್ ಚರಂಡಿ ನಿರ್ಮಿಸಿ ಮಣ್ಣು ಮುಚ್ಚಿರುವ ಸಮಸ್ಯೆ.
ಜಲಜೀವನ್ ಕೊಳವೆ ನೀರಿನ ಸಮಸ್ಯೆ.
ಬಾಕ್ಸ್ ಚರಂಡಿ ಸ್ವಚ್ಛಗೊಳಿಸುವುದು
ಈ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ತ್ವರಿತವಾಗಿ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ