ಕನ್ನಡ ರಾಜ್ಯೋತ್ಸವ 2026ರ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ (ರಿ.) ವತಿಯಿಂದ ಆಯೋಜಿಸಲಾದ ಜಾನಪದ ಕಲೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕುಮಾರಿ ಶ್ರಾವ್ಯ ಅವರು ರ್ಯಾಂಪ್ ವಾಕ್ ಹಾಗೂ ಡ್ಯಾನ್ಸ್ ವಿಭಾಗದಲ್ಲಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಆಯೋಜಕರಾದ ಡಾ. ಹುಸೇನಸಾಬ ಎಫ್. ಕೆರೂರ ಅವರ ನೇತೃತ್ವದಲ್ಲಿ ನಡೆದ ಈ ಸಮಾರಂಭದಲ್ಲಿ ಶ್ರಾವ್ಯ ಅವರ ನೃತ್ಯ ಪ್ರತಿಭೆ ಹಾಗೂ ಕಲಾ ಪ್ರದರ್ಶನವನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚಿಕ್ಕ ವಯಸ್ಸಿನಲ್ಲಿಯೇ ನೃತ್ಯ ಕಲೆಯಲ್ಲಿ ಆಸಕ್ತಿ ಬೆಳೆಸಿಕೊಂಡಿರುವ ಶ್ರಾವ್ಯ ಅವರು ತಮ್ಮ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ಈ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಇವರ ಸಾಧನೆಗೆ ಕುಟುಂಬಸ್ಥರು, ಹಿತೈಷಿಗಳು ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.
ಶ್ರಾವ್ಯ ಅವರು ಮುಂದಿನ ದಿನಗಳಲ್ಲಿಯೂ ಕಲಾ ಕ್ಷೇತ್ರದಲ್ಲಿ ಇನ್ನಷ್ಟು ಎತ್ತರದ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.
ವರದಿ ✍️ಸೂರಿ ಬಣಕಲ್
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ