ರಾಜಕೀಯ ನಾಯಕರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಎಂದು ಮೃತರು ಡೆತ್ನೋಟ್ ಬರೆದಿದ್ದರು. ಡೆತ್ನೋಟ್ ಬರೆದಿಟ್ಟು ಸೋಮಶೇಖರ್(52) ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗಾಗಿ ಕುಟುಂಬಸ್ಥರು ಧರಣಿ ನಡೆಸಿದ್ದಾರೆ.
ಚಿಕ್ಕಮಗಳೂರು: ಡೆತ್ನೋಟ್ ಬರೆದಿಟ್ಟು ಕರ್ತವ್ಯ ನಿರತ ಕಂದಾಯ ನಿರೀಕ್ಷಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ನಡೆದಿದೆ.
ಲಕ್ಕವಳ್ಳಿ ಬಳಿ ಭದ್ರಾ ಕಾಲುವೆಗೆ ಹಾರಿ ಆರ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿ ಸೋಮಶೇಖರ್ (52) ಎಂಬವರಾಗಿದ್ದಾರೆ. ಡೆತ್ನೋಟ್ನಲ್ಲಿ ತರೀಕೆರೆ ಶಾಸಕ ಸುರೇಶ್ ಆಪ್ತರಾಗಿರುವ ಮೂವರ ಹೆಸರು ಉಲ್ಲೇಖಿಸಲಾಗಿದೆ. ಧನಪಾಲ್, ರಮೇಶ್, ಸಂಜೀವ್ ಕುಮಾರ್ ಎಂಬ ಮೂವರ ಹೆಸರು ಉಲ್ಲೇಖಿಸಿ, ಅವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡುತ್ತಿರುವುದಾಗಿ ಬರೆದಿಟ್ಟು ಜೀವ ಕಳೆದುಕೊಂಡಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಡೆತ್ನೋಟ್ ಬರೆದಿಟ್ಟು ಕಂದಾಯ ನಿರೀಕ್ಷಕ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸುವಂತೆ ಠಾಣೆ ಎದುರು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣೆ ಎದುರು ಕುಟುಂಬಸ್ಥರು ಧರಣಿ ನಡೆಸಿದ್ದಾರೆ. ರಾಜಕೀಯ ನಾಯಕರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಎಂದು ಮೃತರು ಡೆತ್ನೋಟ್ ಬರೆದಿದ್ದರು. ಡೆತ್ನೋಟ್ ಬರೆದಿಟ್ಟು ಸೋಮಶೇಖರ್(52) ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗಾಗಿ ಕುಟುಂಬಸ್ಥರು ಧರಣಿ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
