ಹಿಂದಿ ಕಿರುತೆರೆಯ ಜನಪ್ರಿಯ ನಟ ಸಿದ್ಧಾರ್ಥ್ ಶುಕ್ಲಾ ಅವರು ಗುರುವಾರ (ಸೆ.2) ಹೃದಯಾಘಾತದಿಂದ ಮೃತರಾಗಿದ್ದಾರೆ.
ಬಿಗ್ ಬಾಸ್ ಹಿಂದಿ 13ನೇ ಸೀಸನ್ ವಿನ್ನರ್ ಆಗಿದ್ದ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ‘ಬಾಲಿಕಾ ವಧು’ ಸೇರಿ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಅವರು ಜನಪ್ರಿಯತೆ ಗಳಿಸಿದ್ದರು.ಬುಧವಾರ ರಾತ್ರಿ ಮಲಗುವಾಗು ಅವರು ಯಾವುದೋ ಔಷಧಿ ಸೇವಿಸಿದ್ದರು. ಆದರೆ ಗುರುವಾರ ಬೆಳಗ್ಗೆಯೊಳಗೆ ಅವರು ನಿಧನರಾಗಿದ್ದಾರೆ ಎಂದು ಮುಂಬೈನ ಕೂಪರ್ ಆಸ್ಪತ್ರೆ ಮೂಲಗಳು ತಿಳಿಸಿವೆ. ಸಿದ್ಧಾರ್ಥ್ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು, ಸ್ನೇಹಿತರು ಕಂಬನಿ ಮಿಡಿಯುತ್ತಿದ್ದಾರೆ.