ಬಣಕಲ್ ಪಟ್ಟಣದಲ್ಲಿ ಕೆಲ ವರ್ಷಗಳಿಂದ ವಾಸವಾಗಿದ್ದ ನಿರ್ಗತಿಕರೊಬ್ಬರು 3ದಿನಗಳ ಹಿಂದೆ ಮೃತಪಟ್ಟಿದ್ದರು ಮಂಗಳೂರು ಮೂಲದ ಪ್ರವೀಣ ಎಂಬುವವರು ಕಳೆದ ಕೆಲ ವರ್ಷಗಳಿಂದ ಬಣಕಲ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡು ಬದುಕು ಸಾಗಿಸುತಿದ್ದರು ಕೆಲ ತಿಂಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಪ್ರವೀಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು ಆದರೆ ಮತ್ತೆ ತೀವ್ರ ಅನಾರೋಗ್ಯ ಪೀಡಿತರಾಗಿ ಬಣಕಲ್ ಸಮುದಾಯ ಭವನದ ಎದುರು 3ದಿನಗಳ ಹಿಂದೆ ಮೃತ ಪಟ್ಟಿದ್ದರು ಶವವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ 3ದಿನಗಳ ಕಾಲ ಶವಗಾರದಲ್ಲಿ ಇಡಲಾಗಿತ್ತು ಇಂದು ಮರಣೊತ್ತರ ಪರೀಕ್ಷೆ ನಡೆಸಿ ಸಂಬಂದಿಕರು ಯಾರು ಬರದ ಕಾರಣ ಬಣಕಲ್ ಹಿಂದೂ ರುದ್ರಭೂಮಿಯಲ್ಲಿ ಬಣಕಲ್ ಭಜರಂಗದಳ, ವಿಶ್ವ ಹಿಂದೂ ಪರಿಷತ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಧರ್ಮಸ್ಥಳ ವಿಪತ್ತು ನಿರ್ವಣಾ ಘಟಕದ ಸದಸ್ಯರು, ಸ್ಥಳೀಯರು ಹಾಗೂ ಬಣಕಲ್ ಪೊಲೀಸ್ ಸಿಬ್ಬಂದಿಗಳು ಸೇರಿ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು.
