ಬಣಕಲ್ :ಬಣಕಲ್ ಪೊಲೀಸ್ ಠಾಣೆಯ ನೂತನ ಮಹಿಳಾ ಸಬ್ ಇನ್ಸ್ಪೆಕ್ಟರ್ ಆಗಿ ಗಾಯತ್ರಿ ನೇಮಕಗೊಂಡಿದ್ದಾರೆ. ಬಣಕಲ್ ನಲ್ಲಿ 2 ವರ್ಷಗಳ ಕಾಲ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿ ಶ್ರೀನಾಥ್ ರೆಡ್ಡಿ ಕೊಪ್ಪ ಠಾಣೆಗೆ ವರ್ಗಾವಣೆ ಯಾದಾ ಹಿನ್ನಲೆಯಲ್ಲಿ ಇವರ ಸ್ಥಾನದಿಂದ ತೆರವಾಗಿತ್ತು.
ಗಾಯತ್ರಿ ಯವರು ಲಿಂಗದಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, ಗೋಣಿಬಿಡು ಠಾಣೆಯಲ್ಲಿ ಕರ್ತವ್ಯದಲ್ಲಿದ್ದು, ಈಗ ಬಣಕಲ್ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬುಧವಾರದಂದು ಕರ್ತವ್ಯಕ್ಕೆ ಹಾಜರಾಗಿದ್ದ ಹಿನ್ನಲೆಯಲ್ಲಿ ಇಂದು ಫ್ರೆಂಡ್ಸ್ ಕ್ಲಬ್ ರಿ ಬಣಕಲ್ ಇವರ ವತಿಯಿಂದ ಠಾಣೆಗೆ ಭೇಟಿ ನೀಡಿ ಶುಭಾ ಕೊರಲಾಯಿತು.
ಈ ಸಂದರ್ಭದಲ್ಲಿ ಕ್ಲಬ್ ನ ಸದಸ್ಯರಾದ ಅರುಣ್, ಸೂರಿ, ನಿಶಾಂತ್, ಸಿದ್ದಿಕ್, ವೀಕ್ಷಕ್, ಹಸೆನ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಣಕಲ್ ನ್ಯೂಸ್ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ