ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂಡಿಗೆರೆಯಲ್ಲಿ ಸಂಸದರಾದ ಪ್ರತಾಪ್ ಸಿಂಹ ಹಾಗೂ ತೇಜಸ್ವಿ ಸೂರ್ಯ ಅವರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು. ಮೂಡಿಗೆರೆ ಯಲ್ಲಿ ನೂತನವಾಗಿ ಆರಂಭವಾಗಿರುವ ಹೊಯ್ಸಳ ಹೆಲ್ತ್ ಕೇರ್ ಉದ್ಘಾಟನೆಗೆ ಆಗಮಿಸುವುದನ್ನು ಅರಿತ ಮೂಡಿಗೆರೆ ತಾಲ್ಲೂಕ್ಕಿನ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೂರಾರು ಕಾರ್ಯಕರ್ತರು ಮೂಡಿಗೆರೆ ಬಸ್ ನಿಲ್ದಾಣದ ಸಮೀಪ ಸಂಸದರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿದರು.
Banakal News ನಮ್ಮ ನಡೆ ರೋಚಕ ಸುದ್ದಿಯ ಕಡೆ